Thursday, April 25, 2024
spot_imgspot_img
spot_imgspot_img

ನಾನೇನು ಕದ್ದು ಮುಚ್ಚಿ ಕೊಲಂಬೋಗೆ ಹೋಗಿರಲಿಲ್ಲ..! ಜಮೀರ್ ಗೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು”

- Advertisement -G L Acharya panikkar
- Advertisement -

ಬೆಂಗಳೂರು: ಜೆಡಿಎಸ್ ಪಕ್ಷದ ಗೌಪ್ಯ ಕಾರ್ಯಸೂಚಿ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪ್ರಮುಖ ನಾಯಕರೊಂದಿಗೆ ಶ್ರೀಲಂಕಾದ ಕೊಲಂಬೋಗೆ ಒಮ್ಮೆ ಪ್ರವಾಸ ಹೋಗಿದ್ದು ನಿಜ. ಆದರೆ, ಕದ್ದು ಮುಚ್ಚಿ ಕೊಲಂಬೋ ಯಾತ್ರೆ ಮಾಡಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್​ ಮೂಲಕ  ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಎಚ್​ಡಿಕೆ ಒಂದಾನೊಂದು ಕಾಲದಲ್ಲಿ ನಮ್ಮ ಪಕ್ಷದಲ್ಲಿದ್ದ ರಾಜಕಾರಣಿಯೊಬ್ಬರು ‘ಜೆಡಿಎಸ್ ಶಾಸಕರು ಮತ್ತು ನಾನು ಕೊಲಂಬೋ ಪ್ರವಾಸ ಕೈಗೊಂಡಿದ್ದಾಗಿ’ ನೀಡಿರುವ ಹೇಳಿಕೆ ಎತ್ತಣ ಮಾಮರ ಎತ್ತಣ ಕೋಗಿಲೆ ಎಂಬಂತಿದೆ ಎಂದು ಜಮೀರ್ ಅಹ್ಮದ್ ಹೆಸರು ಹೇಳದೆ ವ್ಯಂಗ್ಯವಾಡಿದ್ದಾರೆ.

2014 ರ ಜೂನ್​ನಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತವಾಗಿ ಚರ್ಚಿಸಲು ಕೊಲಂಬೋಗೆ ಪ್ರವಾಸ ಹೋಗುವುದಾಗಿ ಬಹಿರಂಗವಾಗಿಯೇ ಮಾಧ್ಯಮಗಳಿಗೆ ಹೇಳಿ ಹೋಗಿದ್ದೆವು. ಅಲ್ಲಿ ನಡೆದ ಶಾಸಕರ ಜೊತೆಗಿನ ಚರ್ಚೆಯ ದೃಶ್ಯಾವಳಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದೆವು. ಇದರಲ್ಲಿ ಯಾವುದೇ ಗುಟ್ಟು ಇರಲಿಲ್ಲ’ ಎಂದಿರುವ ಎಚ್​ಡಿಕೆ, ವಿಮಾನ ಹತ್ತುವಾಗಲೂ ಮತ್ತು ವಾಪಸ್​ ಬಂದಾಗಲೂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ. ಕೊಲಂಬೋ ಪ್ರಯಾಣ ಅದೇ ಮೊದಲು ಮತ್ತು ಕೊನೇ. ಇದರಲ್ಲಿ ಬಚ್ಚಿಡುವುದು ಏನೇನೂ ಇಲ್ಲ. ಅವರು ನಮ್ಮೊಂದಿಗೆ ಬಂದಿದ್ದರೇ ಹೊರತು ನಾವು ಅವರೊಂದಿಗೆ ಹೋಗಿರಲಿಲ್ಲ ಎಂದು ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.

ಇನ್ನು ನೆರೆಯ ರಾಜ್ಯ ಗೋವಾ ಇಲ್ಲವೇ ರಾಜ್ಯದ ರೆಸಾರ್ಟ್ನಲ್ಲಿ ಸಭೆ ನಡೆಸುವುದಕ್ಕಿಂತ ಯಾವುದೇ ಅಡಚಣೆ ಇಲ್ಲದೆ ಶಾಸಕರೊಂದಿಗೆ ಮುಕ್ತವಾಗಿ ಚರ್ಚಿಸಲು ಕೊಲಂಬೋ ಪ್ರವಾಸ ದುಬಾರಿಯಲ್ಲ ಎಂಬ ಕಾರಣಕ್ಕೆ ಇಂತಹ ಸಭೆ ನಡೆಸಿದ್ದು ನಿಜ ಎಂದಿರುವ ಕುಮಾರಸ್ವಾಮಿ, ವಿಮಾನ ಹತ್ತುವಾಗಲೂ ಮತ್ತು ವಾಪಸು ಬಂದಾಗ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಎಂದಿನಂತೆ ತಮ್ಮ ಟ್ವೀಟ್‌ನಲ್ಲಿ ಪುರಂದರದಾಸರ ವಚನವನ್ನು ಉಲ್ಲೇಖಿಸಿರುವ ಎಚ್‌ಡಿಕೆ, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ, ವಿಚಾರವಿಲ್ಲದೆ ಪರರ ದುಶಿಸುವುದಕ್ಕೆ ಚಾಚಿ ಕೊಂಡಿರುವಂತ ನಾಲಿಗೆ, ಸತತವು ನುಡಿ ಕಂಡ್ಯ ನಾಲಿಗೆ, ಚಾಡಿ ಹೇಳಲು ಬೇಡ ನಾಲಿಗೆ ಎಂದು ಟ್ವೀಟ್​ ಮೂಲಕ  ತಿರುಗೇಟು ನೀಡಿದ್ದಾರೆ.

- Advertisement -

Related news

error: Content is protected !!