- Advertisement -
- Advertisement -
ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಹಿಡಿದುಕೊಂಡು ಮುಂದೆ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಯಾವ ರೀತಿ ಹೋರಾಟ ಮಾಡಬೇಕೆಂದು ವಿಪಕ್ಷಗಳಾದ ಜೆಡಿಎಸ್ ಮತ್ತು ಬಿಜೆಪಿ ಪ್ಲ್ಯಾನ್ ಮಾಡಿವೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿಬಂದಿದ್ದರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ.
ಈ ಬಗ್ಗೆ ಇಂದು (ಜುಲೈ 28) ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಭೆ ಮಾಡಿ ಚರ್ಚೆ ಮಾಡಿದ್ದಾರೆ. ಬಳಿಕ ನಾಯಕರು ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ ಸೋರಿದೆ. ಸುದ್ದಿಗೋಷ್ಠಿ ವೇಳೆಯಲ್ಲೇ ದಿಢೀರ್ ಮೂಗಿನಲ್ಲಿ ರಕ್ತಸ್ರಾವವಾಗಿದೆ. ಇದರಿಂದ ಕೆಲ ಕಾಲ ಆತಂಕ ಸೃಷ್ಟಿಸಿದ್ದು, ಕೂಡಲೇ ಕುಮಾರಸ್ವಾಮಿ ಅವರನ್ನು ಪುತ್ರ ನಿಖಿಲ್ ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
- Advertisement -