- Advertisement -
- Advertisement -


ಕಾಸರಗೋಡು: ಪ್ರೀತಿ ನೆಪದಲ್ಲಿ 17 ವರ್ಷದ ಯುವತಿಯನ್ನು ಹಲವೆಡೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಪೊಲೀಸರು ಇಬ್ರಾಹಿಂ ಸೈಫ್ ಅಲಿ (22) ಎಂಬಾತನನ್ನು ಬಂಧಿಸಿದ್ದಾರೆ. ಕುಂಬಳೆ ಎಸ್‌ಐ ವಿ.ಕೆ. ಅನಿಶ್ ಮತ್ತು ತಂಡ ಆರೋಪಿಯನ್ನು ಬಂಧಿಸಿದ್ದಾರೆ.
ಸಂತ್ರಸ್ಥ ಅಪ್ರಾಪ್ತೆ ಕಳೆದ ತಿಂಗಳು ಕಿರುಕುಳದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಳು. ಮಾಹಿತಿ ತಿಳಿದು ಯುವಕ ದೇಶ ತೊರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ತನಿಖೆ ಮುಂದುವರಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸರು ಯುವಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ರಾಹಿಂ ಸೈಫ್ ಅಲಿ ಮಂಗಳೂರಿನ ಕಾಲೇಜು ವಿದ್ಯಾರ್ಥಿ ಎನ್ನಲಾಗಿದೆ.
- Advertisement -