- Advertisement -
- Advertisement -
ವಿಟ್ಲ: ವಿಷ್ಣುನಗರ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ಯುವಕವೃಂದ ಇದರ ವತಿಯಿಂದ ಭಾರತ ಮತ್ತು ಚೀನಾ ಯುದ್ದದಲ್ಲಿ ಹುತಾತ್ಮರಾದ ನಮ್ಮ ವೀರ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿಟ್ಲ ತಾಲೂಕಿನ ಸೇವಾ ಪ್ರಮುಖ್ ರಮೇಶ್ ಧರ್ಮನಗರ ಅವರ ಉಪಸ್ಥಿತಿಯಲ್ಲಿ, ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿಯ ಸದಸ್ಯರು ಹಾಗೂ ಯುವಕವೃಂದದ ಕಾರ್ಯಾಧ್ಯಕ್ಷರು, ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
- Advertisement -