Saturday, June 28, 2025
spot_imgspot_img
spot_imgspot_img

ವಿಟ್ಲ: (ಸೆ.06) ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ

- Advertisement -
- Advertisement -

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರ ಇಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ. 06ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಲಿದೆ.

ಬೆಳಿಗ್ಗೆ 7.30ಗಂಟೆಗೆ 4ಕಾಯಿ ಗಣಪತಿ ಹವನದೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು ಬಳಿಕ ಭಜನೆ, ಪಂಚಾಮೃತಾಭಿಷೇಕ ಸಹಿತ ಪವಮಾನ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಭಜನೆ, ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ತೊಟ್ಟಿಲೋತ್ಸವ ನಡೆಯಲಿದೆ.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಯ್ಯ ಕೆ. ವಿಟ್ಲ ಅರಮನೆ ವಹಿಸಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಆಡಳಿತ ಸಮಿತಿ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಬಾಲಕರಿಗೆ, ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಪುಟಾಣಿ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ನಡೆಯಲಿದೆ. ರಾತ್ರಿ 8.00ಗಂಟೆಗೆ ವಾಯ್ಸ್‌ ಆಫ್‌ ಆರಾಧನಾ ತಂಡದಿಂದ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ.

- Advertisement -

Related news

error: Content is protected !!