Friday, May 17, 2024
spot_imgspot_img
spot_imgspot_img

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವ

- Advertisement -G L Acharya panikkar
- Advertisement -

ವಿಟ್ಲ: ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಪಿಲಿಪ್ಪೆ- ವಿಷ್ಣುನಗರ, ಇಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವವು ಸೆ. 06ರಂದು ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ನಡೆಯಿತು.

ಬೆಳಿಗ್ಗೆ 7.30ಗಂಟೆಗೆ 4ಕಾಯಿ ಗಣಪತಿ ಹವನದೊಂದಿಗೆ ಕಾರ್ಯಕ್ರಮವು ಪ್ರಾರಂಭಗೊಂಡು ಬಳಿಕ ಭಜನೆ, ಪಂಚಾಮೃತಾಭಿಷೇಕ ಸಹಿತ ಪವಮಾನ ಅಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತರ್ಪಣೆ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷ್ಣಯ್ಯ ಕೆ. ವಿಟ್ಲ ಅರಮನೆ ವಹಿಸಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಆಡಳಿತ ಸಮಿತಿ, ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಕೃಷ್ಣ ಅಷ್ಟಮಿ ಆಚರಣಾ ಸಮಿತಿಯ ಅಧ್ಯಕ್ಷ ಕೇಶವ ಪೂಜಾರಿ ಪಾಂಡೇಲು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸ್ವಾಗತ ಭಾಷಣವನ್ನು ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಮರುವಾಳ ನೆರವೇರಿಸಿ, ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಸಮಿತಿ ಕಾರ್ಯದರ್ಶಿ ಹರೀಶ್‌ ಮರುವಾಳ ಧನ್ಯವಾದವಿತ್ತರು.

ಸಂಜೆ 6.30ರಿಂದ ಭಜನೆ, ರಂಗಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ, ತೊಟ್ಟಿಲೋತ್ಸವ ನಡೆಯಲಿದೆ. ಪುಟಾಣಿ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ನಡೆಯಿತು. ಬಾಲಕರಿಗೆ, ಬಾಲಕಿಯರಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು. ರಾತ್ರಿ 8.00ಗಂಟೆಗೆ ವಾಯ್ಸ್‌ ಆಫ್‌ ಆರಾಧನಾ ತಂಡದಿಂದ ಸಾಂಸ್ಕೃತಿಕ ಸಂಭ್ರಮ ನಡೆಯಲಿದೆ.

- Advertisement -

Related news

error: Content is protected !!