- Advertisement -
- Advertisement -


ಕುಂದಾಪುರ: ದೇವಸ್ಥಾನಕ್ಕೆ ಹೋಗಿ ಹಿಂತಿರುಗಿ ಬರುತ್ತಿದ್ದ ವೇಳೆ ಬೈಕ್ ಮೇಲೆ ಕಡವೆ ಹಾರಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರನನ್ನು ಕಾವ್ರಾಡಿ ಸಮೀಪದ ಶ್ರೇಯಸ್ ಮೊಗವೀರ (22) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹಸವಾರ ಕಾವ್ರಾಡಿ ಪಡುವಾಲ್ತೂರಿನ ವಿಘ್ನೇಶ್ ಅವರನ್ನು ಚಿಕಿತ್ಸೆಗಾಗಿ ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಸ್ನೇಹಿತರು ಶನಿವಾರ ಮಧ್ಯಾಹ್ನ ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆ ಮುಗಿಸಿ ವಾಪಸ್ಸಾಗುವಾಗ ತಾರೆಕೊಡ್ಲು ಸಮೀಪ ಕಡವೆಯೊಂದು ಬೈಕ್ ಮೇಲೆ ಹಾರಿದೆ. ಇದರಿಂದ ಬೈಕ್ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ. ಬೈಕ್ ನಜ್ಜುಗುಜ್ಜಾಗಿದ್ದು ಕಡವೆ ಕೂಡ ಸಾವನ್ನಪ್ಪಿದೆ. ಶಂಕರನಾರಾಯಣ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








