Saturday, November 2, 2024
spot_imgspot_img
spot_imgspot_img

ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣ; ಆರೋಪಿಗಳಿಬ್ಬರು ಪೊಲೀಸ್‌‌ ವಶ..!

- Advertisement -
- Advertisement -

ಕುಂದಾಪುರ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಎಂಬಲ್ಲಿ ಸೆ.12 ರಂದು ನಡೆದ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿ.ಸಿ ಕ್ಯಾಮರಾದ ಪೂಟೇಜ್ ಆಧಾರದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯನ್ನು ಕುಂದಾಪುರ ಗುಲ್ವಾಡಿಯ ಸಿನಾನ್ (19) ಹಾಗೂ ಇನ್ನೋರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕೃತ್ಯಕ್ಕೆ ಬಳಸಿದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಹೆಚ್ಚುವರಿ ಎಸ್ಪಿಗಳಾದ ಎಸ್.ಟಿ ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರತೇಜ್ ನಿರ್ದೇಶನದಂತೆ ಗಂಗೊಳ್ಳಿ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ಪಿಎಸ್‌ಐ ಹರೀಶ್ ಆರ್., ತನಿಖಾ ಪಿಎಸ್‌ಐ ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿ ರಾಜು ನಾಯ್ಕ ಶಾಂತರಾಮ ಶೆಟ್ಟಿ, ರಾಘವೇಂದ್ರ ಮೊದಲಾದವರಿದ್ದರು.

- Advertisement -

Related news

error: Content is protected !!