


ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಕೆನರಾ ಬ್ಯಾಂಕ್ ಎದುರು ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಫೆ.1ರಂದು ಬೆಳಗ್ಗೆ11.30 ರ ಸುಮಾರಿಗೆ ಸಂಭವಿಸಿದೆ.

ಕುಂದಾಪುರದಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ಹಾಗೂ ಅದೇ ಮಾರ್ಗದಲ್ಲಿ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರು ತೆಕ್ಕಟ್ಟೆ ರಾ.ಹೆ.66ರ ಎಡಭಾಗದ ಬಣ್ಣದಬೈಲು ಸಂಪರ್ಕ ಕಲ್ಪಿಸುವ ಒಳರಸ್ತೆಗೆ ತಿರುಗಿಸುತ್ತಿರುವ ವೇಳೆ ಹಿಂದಿನಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ನೇರವಾಗಿ ಬಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಏರ್ ಬ್ಯಾಗ್ ತೆರೆದಿದ್ದು, ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಎರಡು ವಿದ್ಯುತ್ ಕಂಬಗಳು ತುಂಡಾಗಿದೆ.
ಘಟನೆಯ ತೀವ್ರತೆಗೆ ಒಂದು ಕಾರಿನ ಹಿಂಬದಿ ಸಂಪೂರ್ಣ ಜಖಂಗೊಂಡಿದ್ದು, ಎರಡು ಟಯರ್ ಗಳು ಸಿಡಿದಿದೆ. ಮತ್ತೊಂದು ಕಾರಿನ ಚಾಲಕ ಕುಂದಾಪುರದ ನರಸಿಂಹ ಹೊಳ್ಳ ಇವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಘಟನೆ ಸಂಭವಿಸುತ್ತಿದ್ದಂತೆ ಕೋಟ ಪೊಲೀಸ್ ಸ್ಥಳಕ್ಕೆ ಧಾವಿಸಿ, ಪರಿಶೀಲಿನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.








