Thursday, June 18, 2026
spot_imgspot_img
spot_imgspot_img

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಅಪಾಯದಿಂದ ಪಾರು..!

- Advertisement -
- Advertisement -

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಹಂಗಳೂರು ಸಮೀಪ ಇರುವ ಸಹನಾ ಕನ್ವೆನ್ಶನ್ ಸೆಂಟರ್ ಬಳಿ ನಡೆದಿದೆ.

ಘಟನೆಯಲ್ಲಿ ಲಾರಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರ ವಿರಳವಾಗಿದ್ದುದರಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಲಾರಿಯು ಮಂಗಳೂರಿನ ಕಾಟಿಪಳ್ಳ ಸಮೀಪದ ಕುತ್ತೆತ್ತೂರು ಎಂಬಲ್ಲಿಂದ ಎಂಆರ್‌ಪಿಎಲ್ ಕಂಪನಿಯಿಂದ ಲಕ್ಷಾಂತರ ಮೌಲ್ಯದ ಮ್ಯಾಂಗ್ಪೋಲ್ ಪಾಲಿಪ್ರೊಫೈಲೀನ್ ಎನ್ನುವ ಪ್ಲಾಸ್ಟಿಕ್ ಕಚ್ಚಾ ವಸ್ತುವನ್ನು ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ಪ್ರಯಾಣಿಸುತ್ತಿತ್ತು.

ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಕುಂದಾಪುರ ಸಂಚಾರಿ ಪೊಲೀಸರು ಆಗಮಿಸಿ ಮಗುಚಿ ಬಿದ್ದ ಲಾರಿಯನ್ನು ಮೇಲೆತ್ತಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!