Thursday, October 10, 2024
spot_imgspot_img
spot_imgspot_img

ಕುಂದಾಪುರ: ಅಲೆಗಳ ಅಬ್ಬರಕ್ಕೆ ಸಿಲುಕಿ ಮೀನುಗಾರ ಸಾವು..!

- Advertisement -
- Advertisement -

ಕುಂದಾಪುರ: ಸಮುದ್ರದಲ್ಲಿ ಮೀನುಗಾರಿಕೆ ಸಲುವಾಗಿ ಬಿಟ್ಟಿದ್ದ ಮಾರಣಬಲೆ ತರಲು ಹೋಗಿ ಮೀನುಗಾರ ಅಲೆಗಳ ಅಬ್ಬರದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆ ಪಾರಂಪಳ್ಳಿ ಪಡುಕರೆಯಲ್ಲಿ ನಡೆದಿದೆ.

ಮೃತಪಟ್ಟ ಮೀನುಗಾರ ಭಾಸ್ಕರ ಪೂಜಾರಿ (55) ಎಂದು ಗುರುತಿಸಲಾಗಿದೆ.

ಭಾಸ್ಕರ ಪೂಜಾರಿ ಪಾರಂಪಳ್ಳಿಯ ಮರಿನಾ ಮನೆ ಗೆಸ್ಟ್ ಹೌಸ್ ಸಮೀಪ ಸಮುದ್ರದಲ್ಲಿ ಬಿಟ್ಟಿದ್ದ ಮಾರಣಬಲೆಯನ್ನು ಮೇಲೇತ್ತಲು ಸಮುದ್ರಕ್ಕೆ ಇಳಿದಾಗ ಸಮುದ್ರದ ಅಲೆಗೆ ಸಿಲುಕಿ ಮುಳುಗಿದ್ದಾರೆ.

ತಕ್ಷಣ ಮಲ್ಪೆ ಕರಾವಳಿ ಪೊಲೀಸ್ ಠಾಣೆಯ ಕೆ.ಎನ್.ಡಿ. ಸಿಬ್ಬಂದಿ ಸತೀಶ್ ಮತ್ತು ಸುದರ್ಶನ್ ಎಸ್. ಕುಂದರ್ ಇವರು ಸಮುದ್ರಕ್ಕೆ ಹಾರಿ ವ್ಯಕ್ತಿಯನ್ನು ದಡಕ್ಕೆ ತಂದು ಸ್ಥಳೀಯರ ನೆರವಿನಿಂದ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷಿಸಿ ಭಾಸ್ಕರ್ ಪೂಜಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!