Saturday, May 18, 2024
spot_imgspot_img
spot_imgspot_img

ಕುಂದಾಪುರ: ಲಾಕ್ ಡೌನ್ ಮಾಡಿ ಗ್ರಾಮಕ್ಕೆ ಬೇಲಿ ಹಾಕಿರುವುದನ್ನು ವಿರೋಧಿಸಿ ಸ್ಟೇಟಸ್ ಹಾಕಿದ್ದ ವ್ಯಕ್ತಿ ಸಂಶಯಾಸ್ಪದವಾಗಿ ಸಾವು

- Advertisement -G L Acharya panikkar
- Advertisement -

ಉಡುಪಿ: ಲಾಕ್ ಡೌನ್ ಮಾಡಿದ ಗ್ರಾಮಕ್ಕೆ ಯಾವುದೇ ಅಗತ್ಯ ವಸ್ತುಗಳನ್ನು ನೀಡದೆ ಗ್ರಾಮಕ್ಕೆ ಬೇಲಿ ಹಾಕಿರುವುದನ್ನು ವಿರೋಧಿಸಿದ ವ್ಯಕ್ತಿಯು ಸಂಶಯಾಸ್ಪದ ರೀತಿಯಲ್ಲಿ ಸಾವನನಪ್ಪಿರುವ ಘಟನೆ ಶನಿವಾರ ಬೈಂದೂರು ತಾಲೂಕಿನ ಯಡಮೊಗೆಯಲ್ಲಿ ನಡೆದಿದೆ.

ಮೃತ ವ್ಯಕ್ತಿ ಉದಯ ಗಾಣಿಗ ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಗ್ರಾಮ ಪಂಚಾಯತ್ ಲಾಕ್ಡೌನ್ ಬಗ್ಗೆ ಸ್ಟೇಟಸ್ ಹಾಕಿದ್ದ ಉದಯ ಗಾಣಿಗ ಗ್ರಾಮಸ್ಥರಿಗೆ ಪೂರಕ ವ್ಯವಸ್ಥೆ ಕಲ್ಪಿಸಿ. ಊರಿಗೆ ಬೇಲಿ ಹಾಕಿ ಪೋಸು ಕೊಡಬೇಡಿ ಕೊರೋನಾ ಪೀಡಿತ ಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಿ ಆಮೇಲೆ ಪ್ರಚಾರ ತಗೊಳ್ಳಿ ಸರಕಾರ ಸಹಾಯ ಧನ ನುಂಗಬೇಡಿ ಎಂದು ಸ್ಟೇಟಸ್ ಹಾಕಿದ್ದರು ಎನ್ನಲಾಗಿದೆ.

ಶನಿವಾರ ಸಂಜೆ ರಸ್ತೆಯಲ್ಲಿ ನಿಂತಿದ್ದ ಉದಯ ಗಾಣಿಗ ಮೇಲೆ ಕಾರು ಢಿಕ್ಕಿ ಹೊಡೆಸಿ ಹತ್ಯೆ ಮಾಡಿರುವ ಬಗ್ಗೆ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಬಳಿಕ ಕಾರು ಬಿಟ್ಟು ಓಡಿ ಹೋದ ಸಾಧ್ಯತೆ ಇದೆ ಎನ್ನಲಾಗಿದೆ.

ಸಾರ್ವಜನಿಕರು 108 ಅಂಬ್ಯುಲೆನ್ಸ್ ಮೂಲಕ ಕರೆದೊಯ್ಯುವ ಮಾರ್ಗ ಮಧ್ಯೆ ಉದಯ ಗಾಣಿಗ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಂಕರ ನಾರಾಯಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!