Monday, June 22, 2026
spot_imgspot_img
spot_imgspot_img

ಕುಂದಾಪುರ: ವಿವಾಹಿತ ಮಹಿಳೆ ನಾಪತ್ತೆ; ಸೇತುವೆ ಬಳಿ ಸ್ಕೂಟರ್, ಚಪ್ಪಲಿ ಪತ್ತೆ..!

- Advertisement -
- Advertisement -

ಕುಂದಾಪುರ: ವಿವಾಹಿತ ಮುಸ್ಲಿಂ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಚರ್ಚ್ ರೋಡ್ ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ.

ನಾಪತ್ತೆಯಾದ ಮಹಿಳೆ ಕುಂದಾಪುರ ವಿಠಲವಾಡಿ ಮೂಲದ ಹೀನಾ ಕೌಷರ್ (33) ಎಂದು ಗುರುತಿಸಲಾಗಿದೆ.

ಇವರ ಪತಿ ವಿದೇಶದಲ್ಲಿದ್ದು ಎರಡು ಮಕ್ಕಳು ಹಾಗೂ ತಾಯಿಯೊಂದಿಗೆ ಕುಂದಾಪುರ ವಿಠಲವಾಡಿಯಲ್ಲಿ ವಾಸಿಸುತ್ತಿದ್ದರು. ಸೋಮವಾರ ಬೆಳಿಗ್ಗೆ 4 ಗಂಟೆ ಸುಮಾರಿಗೆ ಕುಂದಾಪುರ ಚರ್ಚ್ ರೋಡ್‌ಯಿಂದ ಕೋಡಿಗೆ ಹೋಗುವ ಸೇತುವೆ ಬಳಿ ಈಕೆಯ ಸ್ಕೂಟರ್ ಹಾಗೂ ಚಪ್ಪಲಿ ಪತ್ತೆಯಾಗಿದೆ. ಈ ಕುರಿತು ಇದೀಗ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿ ಶಾಮಕದಳ ಹಾಗೂ ಸ್ಥಳೀಯರು ಸೇರಿ ನದಿಯಲ್ಲಿ ಹುಡುಕಾಟ ನಡೆಸಿದ್ದು ಎಲ್ಲಿಯೂ ಪತ್ತೆ ಆಗಿರುವುದಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ. ಇದರಿಂದಾಗಿ ಆತ್ಮಹತ್ಯೆಯೋ ಅಥವಾ ನಾಪತ್ತೆಯೋ ಎನ್ನುವ ಅನುಮಾನ ವ್ಯಕ್ತವಾಗಿದೆ.

- Advertisement -

Related news

error: Content is protected !!