Sunday, May 5, 2024
spot_imgspot_img
spot_imgspot_img

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

- Advertisement -G L Acharya panikkar
- Advertisement -

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಕುಂದಾಪುರದ ಪಡುಕೋಣೆ ಎಂಬಲ್ಲಿ ನಡೆದಿದೆ.

ಪಡುಕೋಣೆ ನಿವಾಸಿ ಪ್ರಶಾಂತ್, ಸುನಂದಾ ದಂಪತಿ ಪುತ್ರಿ ಸಿಂಧು (16) ಆತ್ಮಹತ್ಯೆಗೆ ಶರಣಾದವರು. ಈ ವರ್ಷದಿಂದ ಸಿಂಧು ಕುಂದಾಪುರದ ವಡೇರ ಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು, ಸಮೀಪದ ಸರಕಾರಿ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಓದುತ್ತಿದ್ದರು. ಕಳೆದೆರಡು ದಿನಗಳ ಹಿಂದೆ ಅನಾರೋಗ್ಯವೆಂದು ತನ್ನ ಮನೆಗೆ ಹೋಗಿದ್ದ ಸಿಂಧುವನ್ನು ಬುಧವಾರ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಗುರುವಾರ ಶಾಲೆಗೆ ಬರಬೇಕಿದ್ದರಿಂದ ತಂದೆ ಕುಂದಾಪುರಕ್ಕೆ ಬಿಡುವುದಾಗಿ ಹೇಳಿದ್ದು ಆದರೆ ಆಕೆ ತಾನು ಬಸ್ಸಿಗೆ ಹೋಗುವುದಾಗಿ ತಿಳಿಸಿದ್ದಳು. ಇದಾದ ಸ್ವಲ್ಪ ಸಮಯದ ನಂತರ ಮನೆಯವರು ಗಮನಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಸಿಂಧು ಮೃತದೇಹ ಪತ್ತೆಯಾಗಿದೆ.

ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದು, ಬಳಿಕ ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ಪೊಲೀಸರು ಮೃತದೇಹ ರವಾನಿಸಿದ್ದಾರೆ. ಮೃತಳ ತಂದೆ ಪ್ರಶಾಂತ್ ಕುಂದಾಪುರ ಪುರಸಭೆಯಲ್ಲಿ ಪೌರಕಾರ್ಮಿಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಗಂಗೊಳ್ಳಿ ಪಿಎಸ್‌ಐ ಹರೀಶ್ ಆರ್.ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

- Advertisement -

Related news

error: Content is protected !!