Monday, June 15, 2026
spot_imgspot_img
spot_imgspot_img

ಕುಂದಾಪುರ: ಡಿವೈಡರ್ ಗೆ ಢಿಕ್ಕಿ ಹೊಡೆದು ಲಾರಿ ಪಲ್ಟಿ: ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ನಿರ್ವಾಹಕರಿಬ್ಬರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಸಮೀಪದ ಉಪ್ಪುಂದ ಶಾಲೆಬಾಗಿಲು ಎಂಬಲ್ಲಿ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಚಾಲಕನನ್ನು ನಾಯ್ಕನಕಟ್ಟೆ ನಿವಾಸಿ ವಿಶ್ವನಾಥ್ (32) ಎಂದು ಗುರುತಿಸಲಾಗಿದ್ದು, ಇನ್ನೊಬ್ಬನ ಬಗ್ಗೆ ಮಾಹಿತಿ ಲಭಿಸಿಲ್ಲ.

ಬೈಂದೂರಿನಿಂದ ಕುಂದಾಪುರ ಕಡೆಗೆ ಚಲಿಸುತ್ತಿದ್ದ ಲಾರಿ ಶಾಲೆಬಾಗಿಲು ಎಂಬಲ್ಲಿ ಬರುತ್ತಿದ್ದಂತೆ ತಿರುವು ಇರುವ ಸ್ಥಳಕ್ಕೆ ಸಮೀಪದಲ್ಲಿ ಹೆದ್ದಾರಿ ನಡುವೆ ಇರುವ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಎದುರಿನ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಮಂಗಳೂರಿನಿಂದ ಬೆಳಗಾವಿಗೆ ಸರಕು ಸಾಗಿಸುತ್ತಿದ್ದ ಲಾರಿ ಬೈಂದೂರು ಕಡೆಗೆ ಚಲಿಸುತ್ತಿದ್ದು ಅದಕ್ಕೂ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 407 ಲಾರಿ ಚಾಲಕ ವಿಶ್ವನಾಥ ಹಾಗೂ ನಿರ್ವಾಹಕನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣ ನಜ್ಜು ಗುಜ್ಜಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!