- Advertisement -
- Advertisement -





ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂಗಳೂರು ಗ್ರಾಮದಲ್ಲಿ ಆ.28ರಂದು ಮಧ್ಯಾಹ್ನ ವೇಳೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಸ್ಥಳೀಯರಾದ ಶ್ರೀಧರ ಎಂಬವರ ಮಗ ಶ್ರೀಷ(28) ಎಂದು ಗುರುತಿಸಲಾಗಿದೆ.
ಇವರು ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಹಟ್ಟಿಯಂಗಡಿ ಸಿದ್ದಿವಿನಾಯಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದ ಹಿಂದೆ ಶಾಸ್ತ್ರಿ ಪಾರ್ಕ್ ಸಮೀಪ ಪ್ರೈಓವರ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ
ಯತ್ನಿಸಿದ್ದರು.
ಆ.28ರಂದು ವಿಪರೀತ ಮಳೆ ಕಾರಣ ಶಾಲಾ ಕಾಲೇಜು ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದ ಇವರು, ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








