Thursday, April 25, 2024
spot_imgspot_img
spot_imgspot_img

ಭಟ್ಕಳದಿಂದ ಉಡುಪಿಗೆ ಗಾಂಜಾ ಸಪ್ಲೈ, ಐವರ ಬಂಧನ.

- Advertisement -G L Acharya panikkar
- Advertisement -

ಕುಂದಾಪುರ: ಲಾಡ್ಜ್ ಒಂದರಲ್ಲಿ ಗಾಂಜಾ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ದಾಳಿ ನಡೆಸಿದ ಬೈಂದೂರು ಪೊಲೀಸರು ಗಾಂಜಾ ಸಮೇತ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿತರಿಂದ 6 ಮೊಬೈಲ್ ಫೋನ್​ಗಳು, 3 ದ್ವಿಚಕ್ರ ವಾಹನಗಳು ಸೇರಿದಂತೆ ರೂ. 1,71,500.00 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಬಂಧಿತರನ್ನು ಬ್ರಹ್ಮಾವರದ ಮಟಪಾಡಿ ನಿವಾಸಿ ಯೋಗೇಶ್ ಗಾಣಿಗ(24), ಕೇರಳ ತಿರುವನಂತಪುರಂ ನಿವಾಸಿ ಯದುನಾರಾಯಣ(21), ಬೈಂದೂರು ಬಿಜೂರು ನಿವಾಸಿ ಗುರುರಾಜ್ ಪೂಜಾರಿ(25), ಉಪ್ಪುಂದ ನಿವಾಸಿ ಸುನಿಲ್ ಪೂಜಾರಿ(26) ಮತ್ತು ಬಿಜೂರು ನಿವಾಸಿ ರವಿ(25) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗಿನ ಜಾವ 3 ಗಂಟೆಗೆ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ಜಿ. ನಾಯ್ಕ್ ಅವರಿಗೆ ದೊರಕಿದ ಅಧಿಕೃತ ಮಾಹಿತಿ ಆಧರಿಸಿ ಉಪ್ಪುಂದದ ಪ್ರಸಿದ್ಧ ಲಾಡ್ಜ್ ಮೇಲೆ ದಾಳಿ ನಡೆಸಲಾಗಿತ್ತು.

ತನಿಖೆ ವೇಳೆ ಆರೋಪಿಗಳಿಗೆ ಭಟ್ಕಳ ಮೂಲದ ಶಬ್ಬೀರ್ ಎಂಬಾತ ಗಾಂಜಾ ಸರಬರಾಜು ಮಾಡುತ್ತಿದ್ದ ಎನ್ನುವುದು ಗೊತ್ತಾಗಿದೆ. ಬ್ಯಾಗಿನಲ್ಲಿ ಗಾಂಜಾ ಸೇವಿಸಲು ಬಳಸುವ ಒಸಿಬಿ ಸ್ಲಿಮ್ ಪ್ರೀಮಿಯಂ ಎನ್ನುವ ಕಾಗದದ ಚೂರುಗಳು ಪತ್ತೆಯಾಗಿವೆ.ಈ ಸಂಬಂಧ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!