Monday, May 6, 2024
spot_imgspot_img
spot_imgspot_img

ಜರ್ಮನಿಯ ಯುವತಿಯನ್ನು ಹಿಂದೂ ಸಂಪ್ರದಾಯದಂತೆ ವಿವಾಹವಾದ ಕುಂದಾಪುರದ ಯುವಕ

- Advertisement -G L Acharya panikkar
- Advertisement -

ಕುಂದಾಪುರ: ಜರ್ಮನಿಯ ಯುವತಿಯನ್ನು ಕುಂದಾಪುರದ ಯುವಕನೊಬ್ಬ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಕುಂದಾಪುರ ತಾಲೂಕಿನ ಆಜಿ ಮೂಲದ ಯುವಕ ಮತ್ತು ಜರ್ಮನಿಯ ಯುವತಿಯನ್ನು ಮದುವೆಯಾದ ಜೋಡಿ.

ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಣೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು. ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್ ಹಾಗೂ ಜರ್ಮನಿಯ ಪೆಟ್ರ ಶೂಆರ್ ಮತ್ತು ಪೀಟರ್ ಶೂಆರ್ ಮುನಿಸ್ತರ್ ಯುನಿಕಬ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು. ಅದರಂತೆ ಇವರ ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗಳಿಗೆ ಶುಭಹಾರೈಸಿದರು.

- Advertisement -

Related news

error: Content is protected !!