Thursday, July 30, 2026
spot_imgspot_img
spot_imgspot_img

ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ – ಏಮ್ಸ್ ಗೆ ಏರ್ ಲಿಫ್ಟ್!

- Advertisement -
- Advertisement -

ನವದೆಹಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ.

ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್‌ ಮೂಲಕ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಮುಖ್ಯಮಂತ್ರಿ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.


ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲೂ ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ. ಲಾಲೂ ಪ್ರಸಾದ್ ಯಾದವ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟ ಹೆಚ್ಚಾಗಿದೆ, ಮೂತ್ರಪಿಂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವರ ಶ್ವಾಸಕೋಶದಲ್ಲಿ ನೀರಿನ ಶೇಖರಣೆಯಾಗಿದೆ. ಅವರ ಮೂತ್ರಪಿಂಡವು ಕೇವಲ 25 ಪ್ರತಿಶತದಷ್ಟು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಕುಟುಂಬ ಸದಸ್ಯರು ಹೇಳಿದರು.

ಮೇವು ಹಗರಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಜೈಲಿನಲ್ಲಿದ್ದ ಲಾಲೂ ಪ್ರಸಾದ್ ಕಳೆದ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಲಾಲೂ ಯಾದವ್ ಅವರ ಆರೋಗ್ಯ ಸುಧಾರಣೆಗಾಗಿ ಆರ್‌ಜೆಡಿ ಮುಖಂಡರು, ಕಾರ್ಯಕರ್ತರು ಪೂಜೆ- ಹೋಮ ನಡೆಸುತ್ತಿದ್ದಾರೆ.

- Advertisement -

Related news

error: Content is protected !!