Saturday, May 4, 2024
spot_imgspot_img
spot_imgspot_img

ಸುಬ್ರಹ್ಮಣ್ಯ: ನೀರಿನ ಕೊರತೆ ಕುಮಾರ ಪರ್ವತ ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಪ್ರವಾಸಿಗರಿಗೆ (ಫೆ. 1) ಇಂದಿನಿಂದ ನಿಷೇಧಿ ಸಲಾಗಿದೆ.

ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬ‌ರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇ ಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅ ಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ವರ್ಷದ ಕುಮಾರಪರ್ವತ ಚಾರಣದ ಅವ ಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆಎಂದು ಅರಣ್ಯ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!