Saturday, April 20, 2024
spot_imgspot_img
spot_imgspot_img

ಲಕ್ನೋ: ಶಿಕ್ಷಕರೊಬ್ಬರನ್ನ ಗುಂಡಿಕ್ಕಿ ಕೊಂದ ಆರೋಪಿಯನ್ನ ಥಳಿಸಿ ಕೊಂದ ಗ್ರಾಮಸ್ಥರು.

- Advertisement -G L Acharya panikkar
- Advertisement -

ಲಕ್ನೋ: ಶಿಕ್ಷಕರೊಬ್ಬರನ್ನ ಗುಂಡಿಕ್ಕಿ ಕೊಂದ ಅಪರಿಚಿತನನ್ನ ಗ್ರಾಮಸ್ಥರು ಥಳಿಸಿ ಕೊಲೆಗೈದಿರುವ ಘಟನೆ ಉತ್ತರ ಪ್ರದೇಶದ ಕುಶಿನಗರದ ರಾಂಪುರ ಬಂಗಾರಾ ಗ್ರಾಮದಲ್ಲಿ ನಡೆದಿದೆ.ಸುಧೀರ್ ಸಿಂಗ್ ಕೊಲೆಯಾದ ಶಿಕ್ಷಕ. ಇಂದು ಬೆಳಗ್ಗೆ ಶಿಕ್ಷಕ ಸುಧೀರ್ ಸಿಂಗ್ ಮನೆಯ ಮುಂದೆ ಕುಳಿತಿದ್ದರು. ಈ ವೇಳೆ ಗೊರಖ್‍ಪುರ ಮೂಲದ ಓರ್ವ ಸುಧೀರ್ ಸಿಂಗ್ ಅವರ ಮೇಲೆ ಫೈರಿಂಗ್ ಮಾಡಿದ್ದಾನೆ. ಗುಂಡಿನ ಸದ್ದು ಕೇಳಿ ಹೊರ ಬಂದ ಗ್ರಾಮಸ್ಥರು ಆರೋಪಿಯನ್ನ ಹಿಡಿದಿದ್ದಾರೆ.

ಶಿಕ್ಷಕ ಸುಧೀರ್ ಸಿಂಗ್ ಮೇಲೆ ಫೈರಿಂಗ್ ಮಾಡಿದ ಗೊರಖ್‍ಪುರ ಮೂಲದ ವ್ಯಕ್ತಿ ಇಂದು ಬೆಳಗ್ಗೆ ರಾಂಪುರ ಬಂಗಾರಾ ಗ್ರಾಮಕ್ಕೆ ಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದ್ರೆ ಸುಧೀರ್ ಸಿಂಗ್ ಮೇಲೆ ಏಕೆ ಗುಂಡಿನ ದಾಳಿ ನಡೆಸಿದ್ದ ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಗ್ರಾಮಸ್ಥರಿಂದ ಥಳಿತಕ್ಕೊಳಗಾದ ಆರೋಪಿ ಸಹ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!