- Advertisement -
- Advertisement -
ಸಕಲೇಶಪುರ: ಸಕಲೇಶಪುರದ ದೊಡ್ಡತಪ್ಪಲುವಿನ ಬಳಿಯ ಶಿರಾಡಿ ಘಾಟ್‌ನಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮಂಗಳೂರು ಬೆಂಗಳೂರಿನ ಕೊಂಡಿಯಾಗಿರುವ ಈ ರಸ್ತೆ ಇನಷ್ಟು ಕುಸಿತದ ಆತಂಕ ಎದುರಾಗಿದೆ. ಬೆಂಗಳೂರು- ಮಂಗಳೂರು ಅನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲಲು ಬಳಿ ಮತ್ತೆ ಬೃಹತ್ ಭೂಕುಸಿತವಾಗಿದೆ.
ಕನಿಷ್ಠ ಎರಡು ಕಾರುಗಳು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಇದರಡಿ ಸಿಲುಕಿಕೊಂಡಿವೆ. ಮುಂಜಾಗೃತಾ ಕ್ರಮವಾಗಿ ಘಾಟಿಯಲ್ಲಿ ವಾಹನ ಸಂಚಾರ ಪೂರ್ತಿ ರದ್ದುಗೊಳಿಸಲಾಗಿದೆ. ಕಾರ್ಯಾಚರಣಾ ಸಿಬ್ಬಂದಿ ಜೆಸಿಬಿ ಮೂಲಕ ಮಣ್ಣು ತೆರವು ಮಾಡುತ್ತಿದ್ದು, ಸ್ಥಳದಲ್ಲಿ ಆತಂಕ ಹೆಚ್ಚಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ನಡೆಯುವ ಭೀತಿಯಿದೆ. ಸಾಗರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನ ನಡೆಯುತ್ತಿದೆ.
- Advertisement -