


ಮಂಗಳೂರು: ಕಟ್ಟಡ ಕಾಮಾಗಾರಿ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಗರದ ಬಲ್ಮಠ ಬಳಿ ಬುಧವಾರ ಸಂಭವಿಸಿದೆ.
ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಭೂಕುಸಿತ ಸಂಭವಿಸಿ ಮಣ್ಣಿನಡಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಘಟನೆ ನಡೆದ ವಿಚಾರ ತಿಳಿಯುತ್ತಲೇ ಸ್ಥಳಕ್ಕೆ ಅಗ್ನಿಶಾಮಕ ದಳ, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದಾರೆ ಇದಾದ ಕೆಲವು ಗಂಟೆಗಳ ಬಳಿಕ ಓರ್ವ ಕಾರ್ಮಿಕನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹಾಗೂ ಮಣ್ಣಿನಡಿ ಸಿಲುಕಿದ್ದ ಚಂದನ್ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿತ್ತು.
ರಿಟೇನಿಂಗ್ ವಾಲ್ ಮತ್ತು ಶೀಟ್ ಗಳ ಮಧ್ಯೆ ಸಿಲುಕಿದ್ದ ಕಾರ್ಮಿಕನ ರಕ್ಷಣೆಗಾಗಿ ರಾತ್ರಿಯ ವರೆಗೂ ಕಾರ್ಯಾಚರಣೆ ನಡೆಸಿದರೂ ಕಾರ್ಮಿಕನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಸುಮಾರು ಏಳು ಗಂಟೆಯ ವೇಳೆಗೆ ಮೃತದೇಹವನ್ನು ಎನ್ ಡಿ ಆರ್ ಎಫ್ ತಂಡ ಹೊರತೆಗೆದಿದೆ.








