Thursday, May 2, 2024
spot_imgspot_img
spot_imgspot_img

ವಿಟ್ಲ: ಗೃಹಲಕ್ಷ್ಮೀ ಯೋಜನೆಗೆ ಚಾಲನೆ; ಫಲಾನುಭವಿಗಳಿಗೆ ವೀಕ್ಷಿಸಲು ವ್ಯವಸ್ಥೆ ಕಲ್ಪಿಸಿದ ಪ.ಪಂಚಾಯತ್‌

- Advertisement -G L Acharya panikkar
- Advertisement -

ವಿಟ್ಲ: ರಾಜ್ಯದಲ್ಲಿರುವ ಮಹಿಳಾ ಆರ್ಥಿಕ ಸಬಲೀಕರಣದ ಉದ್ದೇಶದಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ತಲಾ ರೂ.2000/-ಗಳನ್ನು ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ.

ಯೋಜನೆಯಡಿ ನೋಂದಾಯಿತ ಫಲಾನುಭವಿಗಳಿಗೆ ಆ.30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಮುಖ್ಯಮಂತ್ರಿಗಳು ಹಾಗೂ ಸಚಿವರು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಫಲಾನುಭವಿಗಳು ಸಾರ್ವಜನಿಕರು ಭಾಗಿಯಾಗಿ ವೀಕ್ಷಣೆ ಮಾಡಲು ವಿಟ್ಲ ಪ.ಪಂ. ವ್ಯಾಪ್ತಿಯ ಅಕ್ಷಯ ಸಮುದಾಯ ಭವನ ಶಾಂತಿನಗರ, ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಪೊನ್ನೊಟ್ಟು ಎಂಬಲ್ಲಿ ಎಲ್.ಇ.ಡಿ ಪರದೆ ವ್ಯವಸ್ಥೆಗೊಳಿಸಲಾಗಿದೆ. ಈ ಕಾರ್‍ಯಕ್ರಮಕ್ಕೆ ಫಲಾನುಭವಿ ಮಹಿಳೆಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫಲಾನುಭವಿಗಳಿಗೆ ನೇರನಗದು ವರ್ಗಾವಣೆ ಮಾಡುವ ಸಂದೇಶ ಬರುವುದರಿಂದ ನೋಂದಾಯಿತ ಫಲಾನುಭವಿಗಳು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿಕೊಂಡಿರುವ ಮೊಬೈಲ್ ಫೋನ್‌ಗಳೊಂದಿಗೆ ಕಾರ್‍ಯಕ್ರಮಕ್ಕೆ ಹಾಜರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!