


ಬಂಟ್ವಾಳ: ಮತದಾನ ಜಾಗೃತಿ ಕುರಿತಂತೆ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಸನ್ನಿಧಿ ಎಲ್.ಎಸ್. ಮತದಾನ ಜಾಗೃತಿಗಾಗಿ ಪತ್ರವನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದರು. ಬರೆದ ಪತ್ರಕ್ಕೆ ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಕಾರ್ಯನಿರ್ವಹಣೆ ಮಾಡಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ. ಸಿಐಒಗೆ ಆದೇಶ
ಬಾಲಕಿಯು ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ತನ್ನ ಸ್ನೇಹಿತರ ಜೊತೆಗೂಡಿ ಬಾಳ್ತಿಲ ಪ್ರದೇಶದಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯ ಮಾಡಿದ್ದು, ಈ ಬಾರಿಯ ಲೋಕಸಭಾ ಚುನಾವಣೆ ಸಂದರ್ಭ ಶೇ. 100 ಮತದಾನವಾಗುವ ಪ್ರತಿಯೊಬ್ಬರಿಗೂ ಜಾಗೃತಿ ಮೂಡಿಸಲು ಅವಕಾಶವಿದೆ ಈ ಪ್ರಸ್ತುತ ತಾವು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.
ಸನ್ನಿಧಿ ಅವರ ಪ್ರಸ್ತಾವನೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಚುನಾವಣೆಗೆ)ಯ ಸರ್ಕಾರದ ಅಧೀನ ಕಾರ್ಯದರ್ಶಿ ಮಧು ಇ.ಸಿ. ಅವರು ಪತ್ರ ಬರೆದಿದ್ದಾರೆ. ರಾಜ್ಯ ಚುನಾವಣಾ ಆಯೋಗದಿಂದ ಶಹಬ್ಟಾಸ್ ಗಿರಿ ಪಡೆದಿರುವ ಸನ್ನಿಧಿ ಕಶೆಕೋಡಿ ಅವರನ್ನು ಮಂಗಳವಾರ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸಮ್ಮಾನಿಸಿದರು. ಸನ್ನಿಧಿ ಜತೆ ಕೆಲಕಾಲ ಮಾತುಕತೆ ನಡೆಸಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಹೇಳಿದ್ದಾರೆ.








