Sunday, June 29, 2025
spot_imgspot_img
spot_imgspot_img

30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವು; ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್​ಐಆರ್ ದಾಖಲು..!

- Advertisement -
- Advertisement -

ಬೆಂಗಳೂರು: 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮೃತಪಟ್ಟ ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ.

ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.

ಈ ಘಟನೆಯ ಸಂಬಂಧ ಮೃತನ ಸಹೋದರ ಶಿವರಾಜ್ ನೀಡಿದ ದೂರಿನನ್ವಯ ಎಫ್‌ಐಆರ್ ದಾಖಲಾಗಿದೆ. ನಿರ್ದೇಶಕ ಯೋಗರಾಜ್‌ ಭಟ್‌ ಮತ್ತು ಮನದ ಕಡಲು ಚಿತ್ರತಂಡ ಸೇರಿ ಚಿತ್ರದ ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಚಿತ್ರದ ಮ್ಯಾನೇಜರ್ ಸುರೇಶ್, ಸಹಾಯಕ ಮ್ಯಾನೇಜರ್ ಮನೋಹರ್ ವಿರುದ್ಧ ದೂರು ದಾಖಲಾಗಿದೆ.

- Advertisement -

Related news

error: Content is protected !!