Monday, July 20, 2026
spot_imgspot_img
spot_imgspot_img

ಲಯನ್ಸ್ ಕ್ಲಬ್ ಪುತ್ತೂರು ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸ್ಮಾರ್ಟ್ ಬೋರ್ಡ್ ಕೊಡುಗೆ

- Advertisement -
- Advertisement -

ಪುತ್ತೂರು: ಲಯನ್ಸ್ ಜಿಲ್ಲೆ ಮುನ್ನೂರ ಹದಿನೇಳು ಡಿ ಇದರ ಸಹಕಾರದಿಂದ ಲಯನ್ಸ್ ಕ್ಲಬ್ ಪುತ್ತೂರು ಇವರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಒಳಪಡುವ ವಿವೇಕಾನಂದ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಸ್ಮಾರ್ಟ್ ಬೋರ್ಡನ್ನು ನೀಡಿದ್ದಾರೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಜಿಲ್ಲೆ ಮುನ್ನೂರ ಹದಿನೇಳು ಡಿ ಜಿಲ್ಲಾ ಸಂಪರ್ಕ ಅಧಿಕಾರಿ ಸುದರ್ಶನ್ ಪಡಿಯಾರ್ ವಿಟ್ಲ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಸಭೆ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ರಮೇಶ್ಚಂದ್ರ ಎಂ ವಹಿಸಿದರು. ಮುಖ್ಯ ಅತಿಥಿಯಾಗಿ ಕ್ಲಬ್ ನ ಅಧ್ಯಕ್ಷೆ ಪ್ರೇಮಲತಾ ರಾವ್ ಉಪಸ್ಥಿತರಿದ್ದು, ಶುಭ ಕೋರಿದರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಕಾರ್ಯದರ್ಶಿ ಅರವಿಂದ ಭಗವಾನ್ ರೈ, ಕೋಶಾಧಿಕಾರಿ ಸುಧಾಕರ್, ವಲಯ ನಿರ್ದೇಶಕ ಸದಾಶಿವ ನಾಯಕ ಸಂಚಾಲಕ ಸುವರ್ಣ ಲೈನ್ಸ್ ಕ್ಲಬ್, ಪುತ್ತೂರಿನ ಸದಸ್ಯರುಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯಣಿ ಆಶಾ ಬೆಲಾರೆ, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಸ್ಕೌಟ್ ಮಕ್ಕಳು ಮತ್ತು ಪ್ರಾಂತೀಯ ಅಧ್ಯಕ್ಷ ಆನಂದ ರೈ ಉಪಸ್ಥಿತರಿದ್ದರು.

- Advertisement -

Related news

error: Content is protected !!