Sunday, July 19, 2026
spot_imgspot_img
spot_imgspot_img

ಲಿಪೈನ್ಸ್‌: ಭೀಕರ ಭೂಕುಸಿತ: ಓರ್ವ ಮೃತ್ಯು, 27 ಮಂದಿ ನಾಪತ್ತೆ..!

- Advertisement -
- Advertisement -

ಲಿಪೈನ್ಸ್‌ನ ಸೆಬು ನಗರದಲ್ಲಿ ಭಾರೀ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಕುಸಿದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಕಸದ ರಾಶಿಯೊಳಗೆ ಹಲವರು ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ.

ಸೆಬು ನಗರದ ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ವೇಳೆ ಕಾರ್ಮಿಕರು ತ್ಯಾಜ್ಯ ವಿಂಗಡಣೆ ಕಾರ್ಯದಲ್ಲಿ ನಿರತರಾಗಿದ್ದರು ಎಂದು ತಿಳಿದುಬಂದಿದೆ.

ಹಠಾತ್ತನೆ ಕುಸಿದ ಕಸದ ರಾಶಿಯಿಂದಾಗಿ ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ತಂಡಗಳು ಇದುವರೆಗೆ 8 ಜನರನ್ನು ಜೀವಂತವಾಗಿ ಕಸದ ಅವಶೇಷಗಳಿಂದ ಹೊರತೆಗೆದಿವೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ. ಉಳಿದ ಗಾಯಾಳುಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಪೊಲೀಸ್ ನಿರ್ದೇಶಕ ಬ್ರಿಗೇಡಿಯರ್ ಜನರಲ್ ರೊಡೆರಿಕ್ ಮಾರನನ್ ತಿಳಿಸಿದ್ದಾರೆ.

ಘಟನೆಯಿಂದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿದ್ದ ಕಾರ್ಮಿಕರಿಗೆ ಮಾತ್ರ ಹಾನಿಯಾಗಿದೆ ಅಥವಾ ಸಮೀಪದ ನಿವಾಸಿಗಳ ಮೇಲೂ ಪರಿಣಾಮ ಬೀರಿದೆಯೇ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ಕಾರ್ಯ ಪೂರ್ಣಗೊಂಡ ಬಳಿಕ ಸಂಪೂರ್ಣ ಚಿತ್ರಣ ಹೊರಬೀಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!