Thursday, May 2, 2024
spot_imgspot_img
spot_imgspot_img

ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟ ಬಂದ್‌

- Advertisement -G L Acharya panikkar
- Advertisement -
vtv vitla

ಬೆಂಗಳೂರು: ಬುಧವಾರ ನಡೆಯಲಿರುವ ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ಇಂದು ಸಂಜೆಯಿಂದಲೇ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್‌ ಆಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಎದುರಾಗಿದೆ.

ರಾಜ್ಯದಲ್ಲಿ ಎಲ್ಲ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ ಮದ್ಯ ಖರೀದಿ ಜೋರಾಗಿಯೇ ಇತ್ತು. ಹಲವೆಡೆ ಅಧಿಕ ದರಕ್ಕೆ ಮಾರಾಟವಾಗಿರುವ ವರದಿಗಳೂ ಬಂದಿವೆ. ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಅಂತೆಯೇ ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ.

ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದು ಸೂಚನೆ ನೀಡಿತ್ತು.

- Advertisement -

Related news

error: Content is protected !!