Sunday, June 29, 2025
spot_imgspot_img
spot_imgspot_img

ವಿಟ್ಲ: ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳು ಪೊಲೀಸ್‌ ವಶಕ್ಕೆ

- Advertisement -
- Advertisement -

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹಾಗೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಾಣಿಲ ಗ್ರಾಮದ ಮುರುವ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಾಫರ್‌ ಸಾದೀಕ್‌ ಮತ್ತು ಅಬ್ದುಲ್‌ ಜಲಾಲ್‌ ಎನ್ನಲಾಗಿದೆ.

ಮಾಣಿಲ ಗ್ರಾಮದ ಮುರುವ ಎಂಬಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾಗ ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ಉಪನಿರೀಕ್ಷಕರು ಹಾಗು ಸಿಬ್ಬಂದಿಗಳು ಪತ್ತೆ ಮಾಡಿ ಒಂದು ಗಂಡು ಕರು, ಕೃತ್ಯಕ್ಕೆ ಬಳಸಿದ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!