Sunday, June 21, 2026
spot_imgspot_img
spot_imgspot_img

ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರ ಬಂಧನ

- Advertisement -
- Advertisement -

ಪುತ್ತೂರು: ಮಂಗಳೂರಿನ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಕಡಂದಲೆ ನಿವಾಸಿ ಹರೀಶ(೪೫) ಹಾಗೂ ಬೊಳುವಾರು ನಿವಾಸಿ ಸಾಗರ್ (೪೦) ಬಂಧಿತರು.

ಪಂಪ್‌ವೆಲ್‌ನ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಲಾಡ್ಜ್ ಸಿಬ್ಬಂದಿ ಹರೀಶ ಮತ್ತು ಬ್ರೋಕರ್ ಸಾಗರ್ ಎಂಬವರನ್ನು ಬಂಧಿಸಿದ್ದಾರೆ.

ಅಲ್ಲದೆ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!