- Advertisement -
- Advertisement -



ಮಂಗಳೂರು : ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಮಾಡಲು ಹೋಗಿ ಸಿಕ್ಕಿ ಬಿದ್ದ ಯುವಕನಿಗೆ ಸ್ಥಳಿಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ತೋಟಬೆಂಗ್ರೆಯಲ್ಲಿ ನಡೆದಿದೆ.
ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ಮನೆಯ ಹಿಂಭಾಗದಿಂದ ಬಂದಿದ್ದ ಯುವಕನೊಬ್ಬ ಕದ್ದು ವೀಡಿಯೋ ಮಾಡುತ್ತಿದ್ದು, ಇದನ್ನು ಗಮನಿಸಿದ ಯುವತಿಯು ಬೊಬ್ಬೆ ಹಾಕಿದ್ದಾಳೆ, ಕೂಡಲೇ ಸ್ಥಳೀಯರು ಬೆನ್ನತ್ತಿ ಯುವಕನನ್ನು ಹಿಡಿದು ತದಕಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗ್ರೆ ನಿವಾಸಿ ಮೊಹಮ್ಮದ್ ರಂಶಿದ್ (21) ಆರೋಪಿ ಎಂದು ಗುರುತಿಸಲಾಗಿದೆ ಮಾದಕ ದ್ರವ್ಯ ವ್ಯವಸನಿಯೂ ಆಗಿರುವ ಈತನನ್ನು ಪಣಂಬೂರು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- Advertisement -