Sunday, May 19, 2024
spot_imgspot_img
spot_imgspot_img

ಇಂದಿನಿಂದ ನೈಟ್ ಕರ್ಫ್ಯೂ ಜಾರಿ! ದಕ್ಷಿಣ ಕನ್ನಡ ಜಿಲ್ಲೆ ಸೇರಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ನೈಟ್ ಕರ್ಫ್ಯೂ ಸಮಯ ಬದಲು ಸಿಎಂ ಘೋಷಣೆ

- Advertisement -G L Acharya panikkar
- Advertisement -

ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು, ಕೊಡಗು, ಮಂಗಳೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿನ ಕೋವಿಡ್ ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು, ಕೋವಿಡ್ ಟಾಸ್ಕ್ ಫೋರ್ಸ್, ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಸಭೆಯ ಬಳಿಕ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗದ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಪ್ಯೂ ಜಾರಿ ಮಾಡಲಾಗುವುದು.‌ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅವಧಿ ರಾತ್ರಿ 9 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಾಗಲಿದೆ ಎಂದರು.

- Advertisement -

Related news

error: Content is protected !!