Sunday, June 14, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗಿಲ್ಲ`ಅನ್ ಲಾಕ್’ ಇಂದು ಸಂಜೆ ಸಿಎಂ ಮಹತ್ವದ ಸೂಚನೆ

- Advertisement -
- Advertisement -

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗದ ಹಿನ್ನೆಲೆಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಸುವ ಬಗ್ಗೆ ಇಂದು ಸಂಜೆ ಸಿಎಂ ಯಡಿಯೂರಪ್ಪ ತೀರ್ಮಾನಿಸಲಿದ್ದಾರೆ ಎನ್ನಲಾಗಿದೆ.

ಮೈಸೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣದಲ್ಲಿ ಇಳಿಕೆಯಾಗುತ್ತಿಲ್ಲ. ಹೀಗಾಗಿ ಈ ಜಿಲ್ಲೆಗಳಲ್ಲಿ ಜೂನ್ 14 ರ ಬಳಿಕ ಒಂದು ವಾರ ಲಾಕ್ ಡೌನ್ ಮುಂದುವರೆಸಲು ಅಧೀಕೃತ ಆದೇಶ ನೀಡಲಿದ್ದಾರೆ ಎನ್ನಲಾಗಿದೆ.

ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿಲ್ಲ. ಹೀಗಾಗಿ ಆ ಜಿಲ್ಲೆಗಳಲ್ಲಿ ಜನರು ಕೋವಿಡ್ ನಿಯಮ ಉಲ್ಲಂಘಿಸದ0ತೆ ಕ್ರಮಕೈಗೊಳ್ಳಲು ಯಡಿಯೂರಪ್ಪ ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಸಚಿವರಿಗೆ ಸೂಚಿಸಿದ್ದಾರೆ.

- Advertisement -

Related news

error: Content is protected !!