ಬೆಂಗಳೂರು: ಭಾನುವಾರ ಸಂಪೂರ್ಣ ಲಾಕ್‌ಡೌನ್ ಇರಲಿದೆ ಎಂದು ರಾಜ್ಯ ಸರಕಾರದ ಸಚಿವಾಲಯದಿಂದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಪ್ರಕಟಣೆ ಹೊರಡಿಸಿದೆ.
ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಸರಕಾರವು ಈ ಸೋಂಕನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದು ಕೊಳ್ಳುವ ಸಂಬಂಧವಾಗಿ ಹಾಲಿ ಚಾಲ್ತಿಯಲ್ಲಿರುವ ಮುಂಜಾಗ್ರತಾ ಕ್ರಮಗಳ ಜೊತೆಗೆ ಇನ್ನೂ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯವಶ್ಯವೆಂದು ನಿರ್ಧರಿಸಿದೆ. ಅದರಂತೆ ಸರಕಾರ ಹೆಚ್ಚುವರಿ ಮಾರ್ಗಸೂಚಿಗಳನ್ನು ಸೇರ್ಪಡೆಗೊಳಿಸಿದ್ದು, ಜು.5ರಿಂದ ಆ.2ರ ತನಕದ ಭಾನುವಾರ ಪೂರ್ಣ ದಿನದ ಲಾಕ್ ಡೌನ್ ಇರತಕ್ಕದು, ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧವಿಲ್ಲ. ಜೊತೆಗೆ ಮೆಡಿಕಲ್, ಹಾಲು ಅಗತ್ಯ ವಸ್ತುಗಳಿಗೆ ಲಾಕ್‌ಡೌನ್ ಸಡಿಲಿಕೆ ಇದೆ ಎಂದು ಮಾಹಿತಿ ಲಭ್ಯವಾಗಿದೆ.
ವಿಟ್ಲದಲ್ಲಿ ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ದಿನಪತ್ರಿಕೆ ಎಂದಿನಂತೆ ಇರಲಿದೆ. ಅನಗತ್ಯ ಸುತ್ತಾಟ, ವಾಹನ ಸಂಚಾರ ನಿಷೇಧಿಸಲಾಗಿದೆ.
.