Sunday, May 25, 2025
spot_imgspot_img
spot_imgspot_img

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್

- Advertisement -
- Advertisement -

ಎಸ್‌ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ. ಸುಳ್ಳು ಆರೋಗ್ಯ ಪ್ರಮಾಣಪತ್ರ ಪಡೆದಿದ್ದಾರೆಂದು ಸುಳ್ಳು ಆರೋಪ ಹಾಗೂ ಕರ್ನಾಟಕ ಕೆಡರ್​ನಿಂದ ಬೇರೆ ರಾಜ್ಯಕ್ಕೆ ಕಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಕುಮಾರಸ್ವಾಮಿ, ನಿಖಿಲ್, ಸುರೇಶ್ ಬಾಬು ವಿರುದ್ಧ ಬೆಂಗಳೂರಿನ ಸಂಜಯನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದು, ಚಂದ್ರಶೇಖರ್ ಅವರು ಈ ದೂರು ಆಧರಿಸಿ ಪೊಲೀಸರು ಎನ್​ಸಿಆರ್ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿರುವ ಅವರು, ತಾನು ಕುಮಾರಸ್ವಾಮಿ ವಿರುದ್ಧ ದಾಖಲಾಗಿರುವ ಮೊಕದ್ದಮೆ ಸಂಖ್ಯೆ 16/2014 ಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಾಕ್ಷ್ಯಾಧಾರಗಳು ಲಭ್ಯವಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ರಾಜ್ಯಪಾಲರ ಅನುಮತಿ ಕೋರಿರುತ್ತೇನೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!