Saturday, April 27, 2024
spot_imgspot_img
spot_imgspot_img

ಬೆಳ್ಳಂಬೆಳಗ್ಗೆ ಪುತ್ತೂರು ಮೂಲದ ತಹಶೀಲ್ದಾರ್‌ ಅಜಿತ್‌ ರೈ ಮನೆ ಮೇಲೆ ಲೋಕಾಯುಕ್ತ ದಾಳಿ

- Advertisement -G L Acharya panikkar
- Advertisement -

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ.

ಬೆಂಗಳೂರಿನ ಕೆಆರ್‌ಪುರಂ ತಹಶೀಲ್ದಾರ್‌ ಅಜಿತ್‌ ರೈ ಮನೆ ಸೇರಿ ಅವರ ಆಪ್ತರಿಗೆ ಸಂಬಂಧಿಸಿದ 10 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದು ಶೋಧ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಅಜಿತ್ ಕುಮಾರ್ ರೈ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಲೋಕಾಯುಕ್ತ ಎಸ್ ಪಿ ಕೆ.ವಿ. ಅಶೋಕ್ ನೇತೃತ್ವದಲ್ಲಿ ಅಜಿತ್ ಅವರ ಮನೆ ಹಾಗೂ ಇತರ ಹತ್ತು ಸ್ಥಳಗಳ ಮೇಲೆ ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ಅಜಿತ್ ಕುಮಾರ್ ಅವರ ಮನೆಯಲ್ಲಿ ಬೃಹತ್ ಪ್ರಮಾಣದ ನೋಟಿನ ಕಂತೆಯೇ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ.ಪುತ್ತೂರಿನ ಸರ್ವೆಯ ಸೊರಕೆಯವರಾದ ಅಜಿತ್ ಕುಮಾರ್ ರೈ ಈ ಹಿಂದೆ ಒತ್ತುವರಿದಾರರಿಗೆ ಸಹಕರಿಸಿದ್ದ ಆರೋಪದ ಮೇಲೆ ಅಮಾನತುಗೊಳಗಾಗಿದ್ದರು

ಈ ವೇಳೆ ಮನೆಯಲ್ಲಿದ್ದ 40 ಲಕ್ಷ ರೂ. ನಗದು ಸೇರಿದಂತೆ ಅನೇಕ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇತ್ತ ಬಾಗಲಕೋಟೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೂ ಲೋಕಾಯುಕ್ತ ದಾಳಿ ಮಾಡಿದೆ.

ವಿದ್ಯಾಗಿರಿಯ ಅಕ್ಕಿಮರಡಿ ಲೇಔಟನಲ್ಲಿರುವ ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ್ ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಬೀಳಗಿ ಭಾಗದ ಸಹಾಯಕ ಕೃಷಿ ನಿರ್ದೇಶಕ ಕೃಷ್ಣ ಶಿರೂರು ಮನೆ ಮೇಲೆ ದಾಳಿ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಲೋಕಾಯುಕ್ತ ಡಿಎಸ್ಪಿ ಪುಷ್ಪಲತಾ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

- Advertisement -

Related news

error: Content is protected !!