Thursday, June 18, 2026
spot_imgspot_img
spot_imgspot_img

ಚೆಕ್‍ನಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ – ಅಧಿಕಾರಿ ಬಂಧನ

- Advertisement -
- Advertisement -

ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ ಈ ಮೊದಲೇ ಚೆಕ್‍ನಲ್ಲಿ 4 ಲಕ್ಷ ರೂ. ಹಣವನ್ನು ಚೆಕ್‍ನಲ್ಲಿ ಪಡೆದಿದ್ದ ಎಂದು ತಿಳಿದು ಬಂದಿದೆ. ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್‍ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ನಗರ ಲೋಕಾಯುಕ್ತ ಎಸ್‍ಪಿ ಶ್ರೀನಾಥ್ ಜೋಶಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

- Advertisement -

Related news

error: Content is protected !!