Sunday, June 21, 2026
spot_imgspot_img
spot_imgspot_img

ಕಡಬ: ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಪೊಲೀಸರಿಂದ ದಾಳಿ

- Advertisement -
- Advertisement -

ಕಡಬ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಕುಶಾಲನಗರ ನಿವಾಸಿಯಾಗಿರುವ ಬಿ.ವಿ.ಜಯಣ್ಣ ಸೋಮವಾರಪೇಟೆ ಪಟ್ಟಣ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದರು.ಅಲ್ಲಿಗೆ ಸಂಬಂಧಿಸಿದ ಅಕ್ರಮ-ಆಸ್ತಿ ಪ್ರಕರಣದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ತನಿಖೆಗಾಗಿ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಚುನಾವಣಾ ಹಿನ್ನೆಲೆಯಲ್ಲಿ ಅವರು ಕಡಬ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವಾರದ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಅಕ್ರಮ ಆಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಮಡಿಕೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಕುಶಾಲನಗರದ ಮನೆ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ್ದು, ಅದರಂತೆ ಕಡಬದಲ್ಲಿ ಲೋಕಾಯುಕ್ತ ಮಡಿಕೇರಿ ಇನ್ಸ್‌ಪೆಕ್ಟರ್ ಶಶಿಕುಮಾ‌ರ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!