Tuesday, June 9, 2026
spot_imgspot_img
spot_imgspot_img

ಬೀದರ್‌ನಲ್ಲಿ ಏಕಕಾಲಕ್ಕೆ 4 ಕಡೆ ಲೋಕಾಯುಕ್ತ ದಾಳಿ

- Advertisement -
- Advertisement -

ಬೀದರ್: ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

ಬೀದರ್ ನಗರದ ಗುರುನಾನಕ್ ಕಾಲೋನಿಯ ನಿವಾಸ, ಭಾಲ್ಕಿಯ ಕಡ್ಯಾಳ ಗ್ರಾಮದ ನಿವಾಸ, ಔರಾದ್‌ನ ಎಡಿ ಆಫೀಸ್ ಮತ್ತು ಔರಾದ್‌ನ ಮುದೋಳ ಕಚೇರಿ ಮೇಲೆ ದಾಳಿ‌‌ ಮಾಡಲಾಗಿದೆ‌.

ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

- Advertisement -

Related news

error: Content is protected !!