- Advertisement -
- Advertisement -


ಬೆಂಗಳೂರು: ಸಚಿವ ಬೈರತಿ ಸುರೇಶ್ ಪಿಎಸ್ (ವೈಯಕ್ತಿಕ ಕಾರ್ಯದರ್ಶಿ) ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಅಪಾರ ಪ್ರಮಾಣದ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಮಾರುತಿ ಬಗಲಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಅಧಿಕಾರಿಗಳು ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ದಾಖಲೆಗಳು ಪತ್ತೆಯಾಗಿದೆ. ಈವರೆಗೆ 8 ನಿವೇಶನಗಳು, 5 ವಾಸ ಮನೆ, 19 ಎಕ್ರೆ ಜಮೀನಿನ ಆಸ್ತಿ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
2 ವರ್ಷಗಳ ಕಾಲ ಸಚಿವ ಬೈರತಿ ಸುರೇಶ್ ಅವರ ವೈಯಕ್ತಿಕ ಕಾರ್ಯದರ್ಶಿ ಆಗಿದ್ದ ಮಾರುತಿ ಬಗಲಿ, 3 ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು.
ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣ ಹಾಗೂ ನಗದು ವಶಪಡಿಸಿಕೊಂಡಿದ್ದಾರೆ.
- Advertisement -








