Tuesday, November 10, 2026
spot_imgspot_img
spot_imgspot_img

ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ; ಡೀಸೆಲ್ ದರ, ಟೋಲ್ ಶುಲ್ಕ ಹೆಚ್ಚಳಕ್ಕೆ ವಿರೋಧ

- Advertisement -
- Advertisement -

ಬೆಂಗಳೂರು: ಡೀಸೆಲ್ ದರ ಹಾಗೂ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ರಾಜ್ಯಾದ್ಯಂತ ಏ.14ರ ಮಧ್ಯರಾತ್ರಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ.

ಈ ಬಗ್ಗೆ ಸಂಘದ ಅಧ್ಯಕ್ಷ ಜಿ.ಆ‌ರ್. ಷಣ್ಮುಖಪ್ಪ ಮಾತನಾಡಿ, ಏ.14 ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಈಗಾಗಲೇ ಕರೆ ನೀಡಲಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿ ರಾಜ್ಯವ್ಯಾಪಿ ಲಾರಿ ಮಾಲೀಕರು ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು, ಮುಷ್ಕರಕ್ಕೆ ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು ಪೆಟ್ರೋಲ್ ಬಂಕ್ ಮಾಲೀಕರು, ಸಂಘಟನೆಗಳು ಸೇರಿದಂತೆ ರಾಜ್ಯವ್ಯಾಪಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಹಾಗಾಗಿ ಮುಷ್ಕರ ನಡೆಸುವುದು ನಿಶ್ಚಿತ ಎಂದು ಹೇಳಿದರು.

- Advertisement -

Related news

error: Content is protected !!