- Advertisement -
- Advertisement -




ಉಡುಪಿ : ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ.
ಕೃಷ್ಣ ರವರು ತನ್ನ ದ್ವಿಚಕ್ರ ವಾಹನದಲ್ಲಿ ಸಂತೆಕಟ್ಟೆಯಿಂದ ಬ್ರಹ್ಮಾವರಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಸ್ತೆ ದುರಸ್ತಿ ಕಾಮಗಾರಿಯಿಂದಾಗಿ ಏಕಪಥದಲ್ಲಿ ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ದುರದೃಷ್ಟವಶಾತ್ ಎದುರಿನಿಂದ ಬರುತ್ತಿದ್ದ ಲಾರಿಗೆ ಕೃಷ್ಣ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೃಷ್ಣ ಅವರು ಎಲೆಕ್ನಿಷಿಯನ್ ಹಾಗೂ ಉಡುಪಿ ನಗರ ಸಭೆಯಲ್ಲಿ ಸಹಾಯಕ ವಾಟರ್ ಸಪ್ಲೆರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇನ್ನು ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿ ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದೆ.
- Advertisement -