Monday, October 19, 2026
spot_imgspot_img
spot_imgspot_img

ನೆಲ್ಯಾಡಿ: ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ಮುಖಾಮುಖಿ ಡಿಕ್ಕಿ, ಎರಡೂ ವಾಹನಗಳು ಬೆಂಕಿಗಾಹುತಿ- ಲಾರಿ ಚಾಲಕ ಸಜೀವ ದಹನ!

- Advertisement -
- Advertisement -

ನೆಲ್ಯಾಡಿ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ.

ಬೆಂಗಳೂರು ಕಡೆಗೆ ಚಲಿಸುತ್ತಿದ್ದ ದುರ್ಗಂಬಾ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ನೆಲ್ಯಾಡಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಬಸ್ಸಿನಲ್ಲಿದ್ದ ಪ್ರಯಾಣಿಕರು ಕೆಳಗಿಳಿದು ಅಪಾಯದಿಂದ ಪಾರಾಗಿದ್ದಾರೆ.

ಬೆಂಕಿಯ ತೀವ್ರತೆ ಹೆಚ್ಚಾಗಿ ಎರಡೂ ವಾಹನಗಳು ಸುಟ್ಟು ಭಸ್ಮವಾಗಿದ್ದು, ಲಾರಿ ಚಾಲಕ ಲಾರಿ ಯೊಳಗೆಸಿಲುಕಿ ಹೊರಬರಲಾಗದೆ ಸಜೀವ ದಹನವಾಗಿದ್ದಾನೆ. ಅಗ್ನಿಶಾಮಕ ದಳ ಹಾಗೂ ಪೊಲೀಸರು ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

- Advertisement -

Related news

error: Content is protected !!