Thursday, June 18, 2026
spot_imgspot_img
spot_imgspot_img

ಓವರ್‌ಟೆಕ್‌ ಭರದಲ್ಲಿ ಲಾರಿ- ಕಾರುಗಳ ನಡುವೆ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ..!

- Advertisement -
- Advertisement -

ಸಕಲೇಶಪುರ: ಓವರ್ ಟೆಕ್ ಮಾಡುವ ಬರದಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸಾವನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಹಾಸನ ನಿವಾಸಿ ಚಂದ್ರೇಗೌಡ (50) ಹಾಗೂ ಗಂಭೀರ ಗಾಯಗೊಂಡವರನ್ನು ಚಿನ್ನೇಗೌಡ (31) ಹಾಗೂ ಶೀಲಾ (40) ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ರಸ್ತೆಯಲ್ಲೇ ತಿರುಗಿದ ಕಾರು ಅದರ ಹಿಂದಿದ್ದ ಹಾಸನದ ಕಡೆ ಹೋಗುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಇನ್ನೊಂದು ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದು, ಗಾಯಾಳುಗಳನ್ನು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಸಕಲೇಶಪುರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!