Saturday, June 6, 2026
spot_imgspot_img
spot_imgspot_img

ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

- Advertisement -
- Advertisement -

ನಿಂತಿದ್ದ ಕ್ರೂಸರ್ ಕಾರಿಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರಿನ ಕೋರಾ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಮೃತ ಪಟ್ಟ ವ್ಯಕ್ತಿಗಳು ಕ್ರೂಸರ್ ಚಾಲಕ ಶಂಕರ್ (35), ಖಾಸಗಿ ಪಡಿತರ ವಿತರಣಾ ಕೇಂದ್ರದ ಮಾಲೀಕ ಸತೀಶ್ (40) ಗಂಗಾವತಿ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಗಂಗಾವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!