ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವು..!
ವಿಟ್ಲ: ಮಾರ್ಬಲ್ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ಗಂಭೀರ ಗಾಯಗೊಂಡ ನಾಲ್ವರಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಮೃತಪಟ್ಟ ವ್ಯಕ್ತಿಯನ್ನು ಉತ್ತರಭಾರತ ಮೂಲದವರು ಎನ್ನಲಾಗಿದೆ. ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಸಾವನ್ನಪ್ಪಿದ್ದ ವ್ಯಕ್ತಿಯನ್ನು ಉತ್ತರ ಭಾರತ ಮೂಲದ ಸುಭಾಶ್ವಂದ್ರ ಎನ್ನಲಾಗಿದ್ದು, ಹರ್ಷದ್ ಮತ್ತು ಪವನ್ ಹಾಗೂ ಇನ್ನೋರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಮೂವರಿಗೆ ಮಂಗಳೂರಿನ ತೇಜಸ್ವಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಗಾಯಗೊಂಡ ನಾಲ್ವರಲ್ಲಿ ಇಬ್ಬರು ಉತ್ತರ ಭಾರತದ ಮೂಲದವರು ಮತ್ತು ಇಬ್ಬರು ಮಂಗಳೂರಿನವರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಒಡಿಯೂರಿಗೆ ಬರುತ್ತಿದ್ದ ಮಾರ್ಬಲ್ ಲಾರಿ ಇಳಿಜಾರು ರಸ್ತೆಯಲ್ಲಿ ಬ್ರೇಕ್ ಫೈಲ್ ಆಗಿ ನೇರವಾಗಿ ದೇವಸ್ಥಾನದ ಕಟ್ಟಡಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ.