Wednesday, July 22, 2026
spot_imgspot_img
spot_imgspot_img

ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಲವ್ಲಿನಾ ಈಗ DSP..!

- Advertisement -
- Advertisement -
vtv vitla

ಜಪಾನ್‌ನಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿರುವ ಭಾರತದ ಹೆಮ್ಮೆಯ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಅವರನ್ನು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡೆಪ್ಯೂಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ (ಡಿಎಸ್‌ಪಿ) ಆಗಿ ನೇಮಕ ಮಾಡಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನೇಮಕ ಪತ್ರವನ್ನು ಹಸ್ತಾಂತರಿಸಿದರು. ಬಾಕ್ಸಿಂಗ್‌ನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿರುವ ಲವ್ಲಿನಾ ಸಾಧನೆಯನ್ನು ಗುರುತಿಸಿ ಡಿಎಸ್‌ಪಿ ಹುದ್ದೆ ನೀಡಿ ಗೌರವಿಸಲಾಗಿದೆ.

READ THIS: ಸೆಮಿಫೈನಲ್ ನಲ್ಲಿ ಸೋತ ಭಾರತೀಯ ಮಹಿಳಾ ಬಾಕ್ಸರ್; ಕಂಚು ಗೆದ್ದ ಲವ್ಲಿನಾ..!

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 69 ಕೆ.ಜಿ. ವಿಭಾಗದಲ್ಲಿ 24 ವರ್ಷದ ಲವ್ಲಿನಾ ಕಂಚಿನ ಪದಕ ಗೆದ್ದಿದ್ದರು. ಈ ಮೂಲಕ ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದ ಭಾರತದ ಮೂರನೇ ಬಾಕ್ಸರ್ ಎನಿಸಿದ್ದರು.

vtv vitla
vtv vitla
vtv vitla
vtv vitla
- Advertisement -

Related news

error: Content is protected !!