Saturday, October 24, 2026
spot_imgspot_img
spot_imgspot_img

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ 3-4 ದಿನ ಭಾರೀ ಮಳೆ ಸಾಧ್ಯತೆ

- Advertisement -
- Advertisement -

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರದ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಂಡಮಾನ್ ಬಳಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ವಾಯುಭಾರ ಕುಸಿತವೇ ಚಂಡಮಾರುತವಾಗಿ ಮಾರ್ಪಾಡಾಗಿ, ಮುಂದಿನ ಎರಡು ದಿನ, ಆಂಧ್ರ ಗಡಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಗಂಭೀರ ಪರಿಣಾಮ ಉಂಟುಮಾಡುತ್ತಿದ್ದು, ದಕ್ಷಿಣ ಜಿಲ್ಲೆಗಳತ್ತ ಮಳೆ ಮಾರುತಗಳನ್ನ ಹೊತ್ತು ಬರುವ ಸಾಧ್ಯತೆ ಇದೆ.

ಮುಂದಿನ ಮೂರು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಎಲ್ಲಾ ಜಿಲ್ಲೆಗಳಿಗೂ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.

ಅ.24 ಅಥವಾ 25ಕ್ಕೆ ಅರ್ನಾಬ್ ಚಂಡಮಾರುತ ಆಂಧ್ರದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇದೆ. ಪರಿಣಾಮ ರಾಜ್ಯದ ಕರಾವಳಿ ಭಾಗಕ್ಕೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಮೀನುಗಾರರಿಗೂ ಹವಾಮಾನ ಇಲಾಖೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದೆ.

- Advertisement -

Related news

error: Content is protected !!