Monday, June 15, 2026
spot_imgspot_img
spot_imgspot_img

LPG ಗ್ಯಾಸ್ ಸಿಲಿಂಡರ್ ದರ ಹೆಚ್ಚಳ!

- Advertisement -
- Advertisement -

ನವದೆಹಲಿ: ದೇಶದಲ್ಲಿ ಮತ್ತೆ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳ ಮಾಡಲಾಗಿದೆ. ಎಲ್ಪಿಜಿ ಅಡುಗೆ ಸಿಲಿಂಡರ್ ಬೆಲೆಯನ್ನು ಮತ್ತೆ 15 ರೂಪಾಯಿ ಹೆಚ್ಚಳ ಮಾಡಲಾಗಿದೆ.

ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ದೇಶಾದ್ಯಂತ ಇಂದಿನಿಂದಲೇ ಹೊಸ ದರಗಳು ಜಾರಿಯಾಗಲಿವೆ ಎಂದು ಹೇಳಲಾಗಿದೆ.

ಪೆಟ್ರೋಲಿಯಂ ಕಂಪನಿಗಳು ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 15 ರೂ. ಹೆಚ್ಚಳ ಮಾಡಿದ್ದು, ದೆಹಲಿಯಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಸಿಲಿಂಡರ್ ಬೆಲೆ ಈಗ 899.50 ರೂ. ಆಗಿದೆ. 5 ಕೆಜಿ ಸಿಲಿಂಡರ್‌ನ ಹೊಸ ದರ ಈಗ 502 ರೂ. ಆಗಿದ್ದು, ಹೊಸ ದರಗಳು ಇಂದಿನಿಂದಲೇ ಜಾರಿಗೆ ಬರಲಿವೆ.

- Advertisement -

Related news

error: Content is protected !!